ಸಮಗ್ರ ನ್ಯೂಸ್: ಭಾರತೀಯ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಸೂಕ್ತ ವ್ಯಕ್ತಿಯ ಹುಡುಕಾಟ ನಡೆಯುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್, ಎಂ.ಎಸ್ ಧೋನಿ, ಅಮಿತ್ ಶಾ ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ. ಆದ್ರೆ ಅಸಲಿಗೆ ಇವರಾರು ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಅರ್ಜಿ ಸಲ್ಲಿಸಲು ಮೇ 27 ಅಂತಿಮ ದಿನವಾಗಿದ್ದು, ಇದಕ್ಕೂ ಮುನ್ನ ಅನೇಕ ಕ್ರಿಕೆಟ್ ಅಭಿಮಾನಿಗಳು ಅರ್ಜಿ ಪಡೆದುಕೊಂಡು ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಮೂಲಗಳ ಪ್ರಕಾರ ಈಗಾಗಲೇ 3,000 ಅರ್ಜಿಗಳು ಬಂದಿದ್ದು, ಕೆಲ ನೆಟ್ಟಿಗರು ಮೋದಿ, ಸಚಿನ್, ಅಮಿತ್ ಶಾ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿ ಬಿಸಿಸಿಐಗೆ ಚಕಮ್ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನ ಮತ್ತು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್ ಟಿ20 ವಿಶ್ವಕಪ್ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.