ಸಮಗ್ರ ನ್ಯೂಸ್: ಬರಬಿಸಿಲಿನಿಂದಾಗಿ ರಾಜ್ಯದಲ್ಲಿ ಹೈರಾಣಾಗಿದ್ದ ರೈತರಿಗೆ ಇದೀಗ ಆರಂಭವಾಗಿರುವ ಮಳೆ ಸಂತಸ ನೀಡಿರುವ ಬೆನ್ನಲ್ಲೇ. ಸರ್ಕಾರದಿಂದ ಅನ್ನದಾತನಿಗೆ ಕಹಿ ಸುದ್ದಿ ಸಿಕ್ಕಿದೆ. ಬರಗಾಲದಿಂದ ಬೀಜೋತ್ಪಾದನೆ ಕುಂಠಿತವಾದ ಹಿನ್ನಲೆಯಲ್ಲಿ ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023 ಕ್ಕೆ ಹೋಲಿಸಿದರೆ ಈ ಬಾರಿ ಶೇ.48.50 ರಷ್ಟು ಹೆಚ್ಚಾಗಿದೆ.
ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಕಾರ್ಯ ಮಾಡಲು ಸಜ್ಜಾಗುತ್ತಿದ್ದಾರೆ. ಆದರೆ ರಾಜ್ಯದ ರೈತರಿಗೆ ಬಿತ್ತನೆ ಬೀಜಗಳ ದರ ಹೆಚ್ಚಳ ಶಾಕ್ ನೀಡಿದೆ. ಹೆಸರು 805 ರೂ. ಉದ್ದು 660, ತೊಗರಿ 776, ಸೋಯಾಬಿನ್ 1,431 ರೂ. ಇದ್ದು, ಕಳೆದ ಬಾರಿಗಿಂತ ಈ ಬಾರಿ 20-30 ಪಸೆರ್ಂಟ್ ದರ ಹೆಚ್ಚಳ ಮಾಡಲಾಗಿದೆ. ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ.