ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆ ನಡೆದಿತ್ತು, ಈ ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನೇ 200ಕ್ಕೂ ಹೆಚ್ಚು ಮಂದಿ ಸಂಜೆ ಊಟ ಮಾಡಿದ್ದರು. ಸಂಜೆ ಊಟ ಮಾಡಿದವರಿಗೆ ಏಕಾಏಕಿ ವಾಂತಿ ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸುಮಾರು 30 ಮಂದಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಉಳಿದ 10 ಮಂದಿಗೆ ಕೇರೂರ ಗ್ರಾಮದ ಅಂಗವಾಡಿ ಹಾಗೂ 15 ಮಂದಿಗೆ ಯಕ್ಸಂಭಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.