ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾದ ಕೊಹ್ಲಿ

ಸಮಗ್ರ ನ್ಯೂಸ್: ಐಸಿಸಿ ವರ್ಷದ ಏಕದಿನ ಆಟಗಾರ (ICC ODI Player Of The Year 2023) ಪ್ರಶಸ್ತಿಗೆ ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಭಾಜನರಾಗಿದ್ದಾರೆ.

Ad Widget ... ..

ಟಿ20 ವಿಶ್ವಕಪ್ ಆಡುವ ಸಲುವಾಗಿ ನ್ಯೂಯಾರ್ಕ್ ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್ ಎಕ್ಸ್‌ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು.

Ad Widget

35 ವರ್ಷದ ಕೊಹ್ಲಿ 2023 ರಲ್ಲಿ 27 ಏಕದಿನ ಪಂದ್ಯಗಳಿಂದ 24 ಇನ್ನಿಂಗ್ಸ್‌ಗಳಲ್ಲಿ ಆರು ಶತಕಗಳು ಮತ್ತು ಎಂಟು ಅರ್ಧಶತಕಗಳೊಂದಿಗೆ 72.47 ರ ಸರಾಸರಿ ಮತ್ತು 99.13 ರ ಸ್ಟೈಕ್ ರೇಟ್‌ನಲ್ಲಿ 1,377 ರನ್ ಗಳಿಸಿದ್ದಾರೆ. ಈ ಪೈಕಿ ಗರಿಷ್ಠ ಸ್ಕೋರ್ 166* ಆಗಿತ್ತು.

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ, ವಿರಾಟ್ 11 ಪಂದ್ಯಗಳಲ್ಲಿ 95.62 ಸರಾಸರಿಯಲ್ಲಿ 765 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಮೂರು ಶತಕಗಳು, ಆರು ಅರ್ಧ ಶತಕಗಳು ದಾಖಲಾಗಿತ್ತು.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿ ಆರೆಂಜ್‌ ಕ್ಯಾಪ್ ಗೆದ್ದಿದ್ದರು. ಇದೀಗ ಟಿ20 ವಿಶ್ವಕಪ್ ಆಡಲು ಸಜ್ಜಾಗಿದ್ದಾರೆ.

Leave a Comment

Your email address will not be published. Required fields are marked *