ಸಮಗ್ರ ನ್ಯೂಸ್: ಪಲ್ಲಕ್ಕಿ ಇದ್ದ ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ ಹೊಂದಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ವೀರಸಂದ್ರ ವಾಸಿ ರಂಗನಾಥ(33), ಯಾರಂಡಹಳ್ಳಿ ವಾಸಿ ಹರಿಬಾಬು(25) ಮೃತ ದುರ್ದೈವಿಗಳು. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುವಾಗ ಚಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಚಾಲಕನನ್ನು ರಕ್ಷಣೆ ಮಾಡಲು ಹೋಗಿ ಮತ್ತೊಬ್ಬನಿಗೂ ವಿದ್ಯುತ್ ಶಾಕ್ ಆಗಿದೆ.
ಕೂಡಲೇ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆಗೆ ಧಾವಿಸಿದೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.