Ad Widget .

ಎಕ್ಸಿಟ್‌ ಪೋಲ್‌ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..!

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಪೂರ್ಣಗೊಂಡಿದೆ, ನಿನ್ನೆ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬಿದ್ದಿವೆ. ಇದರಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುತ್ತದೆ ಎಂಬ ಮಾಹಿತಿಯೂ ಲಭಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಮಾಹಿತಿ ಸಿಕ್ಕಾಗಿಂದ ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಕೈಗೆತ್ತಿಕೊಳ್ಳಬಹುದಾದ ಯೋಜನೆ ಹಾಗೂ ದೇಶಾದ್ಯಂತ ತಲೆದೋರಿರುವ ಬಿಸಿಗಾಳಿ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

Ad Widget . Ad Widget . Ad Widget .

ಅಧಿಕೃತ ಮೂಲಗಳ ಪ್ರಕಾರ ಪ್ರಧಾನಿ ಮೋದಿಯವರು ಮೊದಲಿಗೆ ಈಶಾನ್ಯ ರಾಜ್ಯಗಳಲ್ಲಿ ಚಂಡ ಮಾರುತದ ನಂತರ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ಅವರು ಬಿಸಿಗಾಳಿ ಸಮಸ್ಯೆ ಬಗ್ಗೆ ಸಭೆ ನಡೆಸಲಿದ್ದಾರೆ. ಅಷ್ಟೇ ಅಲ್ಲದೇ ಪರಿಸರ ದಿನಾಚರಣೆಗೆ ತಯಾರಿ ಬಗ್ಗೆಯೂ ಸಭೆ ನಡೆಸಲಾಗುತ್ತದೆ ಎಂದು ಹೇಳಿದೆ.

ಇನ್ನು ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬರುತ್ತಿದ್ದಂತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ಭಾರತ ಮತ ಹಾಕಿದೆ! ತಮ್ಮ ಮತ ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಪಾಲ್ಗೊಳ್ಳುವಿಕೆ ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಸತ್ತಾತ್ಮಕ ಚೈತನ್ಯವನ್ನು ವೃದ್ಧಿಸುತ್ತದೆ. ನಾನು ಭಾರತದ ನಾರಿ ಶಕ್ತಿ ಮತ್ತು ಯುವಶಕ್ತಿಯನ್ನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ಅವರ ಪ್ರಬಲ ಉಪಸ್ಥಿತಿಯು ಬಹಳ ಉತ್ತೇಜಕ ಸಂಕೇತವಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *