ಸಮಗ್ರ ನ್ಯೂಸ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಬಾಹ್ಯಾಕಾಶ ಪ್ರಯಾಣಕ್ಕೆ ಕೈಗೊಂಡಿದ್ದಾರೆ. ಶನಿವಾರ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಪ್ರಯಾಣ ಬೆಳೆಸಿದ್ದಾರೆ.
ಕಳೆದ ತಿಂಗಳ 7 ರಂದೇ ಸುನೀತಾ ಅಂತರಿಕ್ಷ ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣದಿಂದ ಮುಂದೂಡಲಾಗಿತ್ತು. ವಿಲಿಯಮ್ಸ್ ಹೊರತಾಗಿ ಬುಚ್ ವಿಲ್ಮೋರ್ ಕೂಡ ಅಂತರಿಕ್ಷಕ್ಕೆ ಪ್ರಯಾಣ ಕೈಗೊಳ್ಳಲಿದ್ದಾರೆ. ಸುನಿತಾ ಮತ್ತು ವಿಲ್ಮೋರ್ ಒಂದು ವಾರ ಬಾಹ್ಯಾಕಾಶದಲ್ಲಿಯೇ ಉಳಿಯಲಿದ್ದಾರೆ.