ರೇವ್ ಪಾರ್ಟಿ ಹಾಜರಾಗಿದ್ದ ನಟಿ ಹೇಮಾ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಈ ಪಾರ್ಟಿಯಲ್ಲಿ ಹಾಜರಾಗಿದ್ದರು ಎನ್ನಲಾದ ತೆಲುಗು ನಟಿ ಹೇಮಾರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನಟಿ ಹೇಮಾ ಹೆಸರು ಕೇಳಿ ಬಂದಾಗ ಆಕೆ ಆ ಸಂದರ್ಭದಲ್ಲಿ ನಾನು ಹೈದರಾಬಾದ್ ಫಾರ್ಮ್ ಹೌಸ್ ನಲ್ಲಿ ಇದ್ದೆ ಎಂದು ಹೇಳಿದ್ದರು.

Ad Widget

ಆದರೆ ಸಿಸಿಬಿ ಪೊಲೀಸರು ತಮಗೆ ಸಿಕ್ಕ ಖಚಿತ ಸಾಕ್ಷ್ಯಾಧಾರಗಳ ಮೇಲೆ ಹಾಗೂ ವೈದ್ಯಕೀಯ ಪರೀಕ್ಷೆ ಮೊದಲಾದವನ್ನು ಪರಿಗಣಿಸಿ ಹೇಮಾ ವಿಚಾರಣೆಗೆ ಹಾಜರಾದ ವೇಳೆ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *