ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಬಿಸಿ ಜೋರಾಗಿದ್ದು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಹಾಸನ ಅಶ್ಲೀಲ ವಿಡಿಯೋ ಕೇಸ್ನಿಂದ ಬೇಸತ್ತಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೂರು ದಿನಗಳ ಕಾಲ ಪ್ರವಾಸದಲ್ಲಿ ಇದ್ದರು. ಬಳಿಕ ಒಂದಷ್ಟು ದಿನ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಇಂದು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಯಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ಸ್ ಅಭ್ಯರ್ಥಿ ಶ್ರೇಯಶ್ಸ್ ಪಾಟೀಲ್ ಮುನ್ನಡೆ ಸಾಧಿಸಿದ್ದಾರೆ.
ಹಾಸನ ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಸೋತಿದ್ದಾರೆ. ಪೆನ್ ಡ್ರೈವ್ ಕೇಸ್ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರಿಗೆ ಮರ್ಮಾಘಾತವಾಗಿದೆ. ಕೈ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ಅವರ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.