ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ಈತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ರಾಜೇಶ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಕ್ಕೆ ರಾಜೇಶ್ ಮತ್ತು ತಂಡ ಪಟಾಕಿ ಸಿಡಿಸಿತ್ತು. ಈ ಹಿನ್ನಲೆ ರೊಚ್ಚಿಗೆದ್ದ ಕಳೆಂಜದ ಕುಶಲಪ್ಪ ಗೌಡ ಕಜೆ ಎಂಬಾತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ.