ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ
ಮಾಡಲಿದ್ದಾರೆ ಎನ್ನಲಾಗಿದೆ.

Ad Widget ... .. Ad Widget .

ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ ಹೋಗಿದ್ದು, ಜೂ.9 ಕ್ಕೆ ನಿಗದಿಯಾಗಿದೆ. ಹಾಗೂ ಸಂಸದ ಕುಮಾರಸ್ವಾಮಿ ಅವರು ಕೂಡ ಜೂ.9 ರಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

Ad Widget

ಜೂ.9 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.9 ರಂದು ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ, ಕಾರ್ಯಕ್ರಮವನ್ನು ಈಗ ಮುಂದೂಡಲಾಗುತ್ತಿದೆ. ವರದಿಗಳ ಪ್ರಕಾರ, ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಯ್ಡು ಅವರ ಪ್ರಮಾಣವಚನವನ್ನು ಆರಂಭದಲ್ಲಿ ಯೋಜಿಸಲಾದ ದಿನಾಂಕವಾದ ಜೂನ್ 9 ರ ಬದಲು ಜೂನ್ 12 ಕ್ಕೆ ಮುಂದೂಡಲಾಗಿದೆ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *