Ad Widget .

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಇದರಿಂದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.
ಇದರಲ್ಲಿ ಗುಂಡಿನ ದಾಳಿಗೆ ಮೊದಲು ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ದಾಳಿ ನಡೆಯುತ್ತಿದ್ದಂತೆ ಬಸ್ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಏಳು ಮಂದಿ ಮೃತ ಪಟ್ಟಿದ್ದು, ಒಟ್ಟು ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

Ad Widget . Ad Widget . Ad Widget .

ಘಟನೆಯ ಮಾಹಿತಿ ತಿಳಿದಂತೆ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿದೆ. 33 ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *