ಬಂಟ್ವಾಳ: ಬಿಜೆಪಿ ವಿಜಯೋತ್ಸವದ ಬಳಿಕ ಚಾಕು ಇರಿತ; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ‌ಹಾಗೂ ನಂದ ಕುಮಾರ್‌ಗೆ ಚೂರಿ ಇರಿಯಲಾಗಿದೆ.

Ad Widget ... ..

ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್‌ನಲ್ಲಿ ವಿಜಯೋತ್ಸವ ಆಯೋಜಿಸವಾಗಿತ್ತು. ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ.

Ad Widget

ಈ ವೇಳೆ ಬಂದ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಯುವಕರ ಮೇಲೆ ಅಟ್ಯಾಕ್ ನಡೆದಿದೆ. ಈ ವೇಳೆ ಇಬ್ಬರೂ ಗಾಯಗೊಂಡಿದ್ದು, ಸದ್ಯ ಇಬ್ಬರಿಗೂ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Leave a Comment

Your email address will not be published. Required fields are marked *