ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ ಅವರಿಗೆ ಬಂಧನ ಭೀತಿ ಎದುರಾಗಿದೆ.
ಪ್ರಕರಣದ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ಬಿಎಸ್ ಯಡಿಯೂರಪ್ಪ ಕಾಲಾವಕಾಶ ಕೇಳಿದ್ದಾರೆ.
ನೋಟಿಸ್ ನೀಡಿದ ಬೆನ್ನಲ್ಲೇ ಇಂದೇ ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆ ನಡೆಯಬೇಕಿದೆ. ಈ ನಡುವೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಸರ್ಕಾರದ ಪರ ವಾದಿಸಲು ವಿಶೇಷ ಅಭಿಯೋಜಕರಾಗಿ ವಕೀಲ ಆಶೋಕ್ ನಾಯಕ್ ನೇಮಕ ಮಾಡಲಾಗಿದೆ.
ಒಂದು ವೇಳೆ FIR ರದ್ದು ಕೋರಿರುವ ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ಹೈಕೋರ್ಟ್‌ನಲ್ಲಿ ವಜಾ ಆದರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಆಗುವುದು ನಿಶ್ಚಿತ ಆಗುವಂತೆ ಕಾಣುತ್ತಿದೆ. ಸರ್ಕಾರ ಕೂಡ ಬಂಧನ ಮಾಡಲು ತಯಾರಿ ಮಾಡಿಕೊಳ್ಳುತ್ತಿದೆ ಅನ್ನೋ ಮಾಹಿತಿಯೂ ಹರಿದಾಡ್ತಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿ ಬಂಧನ ಕಡ್ಡಾಯವಾಗಿದ್ದು, ಹೈಕೋರ್ಟ್ ಒಂದು ವೇಳೆ ಗರಂ ಆದರೆ ಕೂಡಲೇ ಬಂಧನ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.