ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್

ಸಮಗ್ರ ನ್ಯೂಸ್: ಕುವೈತ್‌ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 40 ಭಾರತೀಯರು ಮೃತಪಟ್ಟಿದ್ದು, 50 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget ... ..

ಅವರಲ್ಲಿ ಒಟ್ಟು 49 ಮಂದಿ ಮೃತಪಟ್ಟಿದ್ದು ಅವರಲ್ಲಿ 40 ಜನ ಭಾರತೀಯರು ಎಂದು ತಿಳಿದುಬಂದಿದೆ. ಮೃತಪಟ್ಟ ಇತರರು ಪಾಕಿಸ್ತಾನ, ಫಿಲಿಪಿನೋ, ಈಜಿಪ್ಟ್‌ ಮತ್ತು ನೇಪಾಳ ಮೂಲದ ಕಾರ್ಮಿಕರು ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಮಾಹಿತಿ ತಿಳಿಸಿದೆ.

Ad Widget

ಘಟನೆಯ ಕುರಿತು ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಸಭೆಯ ನಂತರ, ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತ ಭಾರತೀಯ ಪ್ರಜೆಗಳ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಘೋಷಿಸಿದ್ದು, ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದ್ದಾರೆ.

‘ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದ ಕುರಿತು ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಾಹ್ಯಾ ಅವರೊಂದಿಗೆ ಮಾತುಕತೆ ನಡೆಸಿದ್ದು, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು, ದುರಂತಕ್ಕೆ ಕಾರಣ ಯಾರು ಎನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ’ ಎಂದು ಜೈಶಂಕರ್ ಎಕ್ಸ್ ನಲ್ಲಿ ಹೇಳಿದ್ದಾರೆ.

Leave a Comment

Your email address will not be published. Required fields are marked *