ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್‌ : ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ‌ ಅಂಬಾಗಿಲಿನಲ್ಲಿ ಸಂಭವಿಸಿದೆ.

Ad Widget ... ..

ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯಲ್ಲಿ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ.

Ad Widget

ಕಾರಿನ ಇಂಜಿನ್ ಬೇರ್ಪಟ್ಟು ಮಾರುದ್ದ ಹೋಗಿ ಬಿದ್ದಿದೆ. ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *