ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು ಬಿಜೆಪಿ -ಜೆಡಿಎಸ್ ಪ್ರತಿಭಟನೆ

ಸಮಗ್ರ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

Ad Widget ... ..

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ ‌‌. ಇದರ ಜೊತೆಗೆ ಬಿಜೆಪಿ – ಜೆಡಿಎಸ್ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅರ್.ಅಶೋಕ್, ಬಿ.ವೈ.ವಿಜಯೇಂದ್ರ, ಸಿ.ಟಿ ರವಿ ಪೋಸ್ಟ್ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದರು.

Ad Widget

Leave a Comment

Your email address will not be published. Required fields are marked *