ಸಮಗ್ರ ನ್ಯೂಸ್: ಶಕ್ತಿ ಯೋಜನೆ ಆರಂಭವಾದಾಗಿನಿಂದ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಬಸ್ ಸಮಸ್ಯೆ ಎದುರಾಗಿತ್ತು. ಇದರ ಮುಖಾಂತರ ಹೆಚ್ಚಿನ ಬಸ್ ಗೆ ಮನವಿ ಮಾಡಲಾಗಿತ್ತು. ಇದರಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ.
ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು KSRTC ಗುರುತಿಸಿ ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್ಆರ್ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ 500 ಬಸ್ಗಳನ್ನು ನಿಯೋಜಿಸಲು ನಿರ್ಧಾರ ಮಾಡಲಾಗಿದೆ. ಸರ್ಕಾರ ಹೊಸ ಬಸ್ ಖರೀದಿಗೆ ಮುಂದಾಗಿದೆ. ಬಿಜೆಪಿ ಸರ್ಕಾರದಲ್ಲಿ ಒಂದು ಹೊಸ ಬಸ್ ಖರೀದಿ ಮಾಡಿರಲಿಲ್ಲ ಇದರಿಂದ ಪ್ರಯಾಣಿಕರಿಗೆ ತುಂಬಾ ಕಷ್ಟ ಆಗಿತ್ತು. ವಿಭಾಗೀಯ ಮಟ್ಟದಲ್ಲಿ ಗುರುತಿಸಲಾಗಿರುವ ಹೊಸ ಮಾರ್ಗಗಳಲ್ಲಿ ಮುಂದಿನ 3 ತಿಂಗಳಲ್ಲಿ ಸೇವೆ ಆರಂಭ ಮಾಡಲಾಗುತ್ತದೆ. ಬಸ್ ಸೇವೆ ಅವಶ್ಯಕತೆಯಿರುವ ಮಾರ್ಗಗಳ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
100 ಹೊಸ ಪಲ್ಲಕ್ಕಿ ಸ್ಲೀಪರ್ ಬಸ್‌ಗಳ ಸೇರ್ಪಡೆಗೆ ಸರ್ಕಾರ ಅನುಮತಿ ನೀಡಿದ್ದು, 20 ಅಂಬಾರಿ, 20 ಐರಾವತ ಉತ್ಸವ ಬಸ್‌ಗಳ ಖರೀದಿಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ ಕೂಡ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ. ಸಾಮಾನ್ಯ ಸಾರಿಗೆ ಬಸ್‌ಗಳ ಜತೆಗೆ ಪ್ರೀಮಿಯಂ ಬಸ್‌ಗಳ ಸಂಖ್ಯೆಯನ್ನೂ ಹೆಚ್ಚಿಸಲು ನಿಗಮ ಯೋಜನೆ ಮಾಡಿದೆ.