ಸಮಗ್ರ ನ್ಯೂಸ್: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಹಿಂದೆ ಕರ್ನಾಟಕ ಹೈಕೋಟ್ರ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ.4ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ ಗಡವುನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಸೆಪ್ಟೆಂಬರ್.15ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದೆ.
ರಾಜ್ಯ ಸರ್ಕಾರದಿಂದ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸೋದನ್ನು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕಡ್ಡಾಯಗೊಳಿಸಲಾಗಿತ್ತು. ಕರ್ನಾಟಕದಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕೂಡ ಅಳವಡಿಸಿಕೊಂಡಿದ್ದಾರೆ. ಇನ್ನೂ ಕೆಲವರು ಅಳವಡಿಸಿಕೊಳ್ಳೋದು ಬಾಕಿ ಇದೆ.