ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಚೇರಿಯ ಸರ್ವೆ ಇಲಾಖೆಗೆ ಸಂಬಂಧ ಪಟ್ಟ ರೆಕಾರ್ಡ್ ಕಚೇರಿಯಲ್ಲಿ ಭಾರಿ ಗಾತ್ರದ ಹೆಬ್ಬಾವು ಬುಧವಾರ ಮುಂಜಾನೆ ಪ್ರತ್ಯಕ್ಷವಾಗಿದೆ.
ಬೆಳಗ್ಗೆ ಕಚೇರಿ ಸಿಬ್ಬಂದಿ ಬಂದು ಬಾಗಿಲು ತೆಗೆದು ನೋಡಿದಾಗ ಹೆಬ್ಬಾವು ಕಂಡಿದ್ದು, ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು. ಬಳಿಕ ಅರಣ್ಯ ಇಲಾಖೆಯವರು ಉರಗ ತಜ್ಞ ಮೋಹನ್ ಪರಿವಾರಕಾನ ಎಂಬವರನ್ನು ಕರೆಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟರು.
ತಾಲೂಕು ಕಚೇರಿಯ ಎರಡನೇ ಮಹಡಿಯಲ್ಲಿ ಭೂ ದಾಖಲೆಗಳ ನಿರ್ದೇಶಕರ ಕಚೇರಿ ಇದ್ದು ಹಾವು ಇಲ್ಲಿಗೆ ಹೇಗೆ ಬಂತೆಂಬುದೇ ಯಕ್ಷಪ್ರಶ್ನೆಯಾಗಿದೆ.