ಸಮಗ್ರ ನ್ಯೂಸ್: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ದೇಶ-ವಿದೇಶ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ತಮ್ಮ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಮಹಿಳಾ ಅಧಿಕಾರಿಗಳು, ಜೆಡಿಎಸ್ ಮುಖಂಡರ ಹೆಂಡತಿಯರನ್ನು ಪ್ರಜ್ವಲ್ ಲೈಂಗಿಕವಾಗಿ ಬಳಿಸಿಕೊಂಡಿರುವ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ.
ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ಪ್ರಕಾರ ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ.