ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿದ್ದು, ವಾರಾಂತ್ಯಕ್ಕೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ, ಜಿಲ್ಲೆಗಳಿಂದ ಜಿಲ್ಲೆಯ ಪ್ರಯಾಣಿಕರ ಓಡಾಟದಿಂದಾಗಿ ಕೆಲವೊಂದು ಕಠಿಣ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.5ರಿಂದ ಆ.15ರವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತದೆ.