ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್‌: ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಬೆನ್ನಲ್ಲೇ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದ್ದು, ಈ ಕುರಿತ ಘೋಷಣೆ ಮಾಡಿದೆ.

Ad Widget ... ..

ತಮಿಳುನಾಡಿದ ಗಡಿ ಜಿಲ್ಲೆಗಳಾದ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಅಗತ್ಯಗಳನ್ನು ಪೂರೈಸಲು ಮತ್ತು ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ಹೊಸೂರಿನಲ್ಲಿ 2 ಸಾವಿರ ಎಕರೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಹೇಳಿದ್ದಾರೆ.

Ad Widget

ಕಳೆದ ಕೆಲವು ವರ್ಷಗಳಿಂದ ಹೊಸೂರು ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ಏರಿಕೆ ಮಾಡುತ್ತಿದ್ದಾರೆ. ಹೊಸೂರನ್ನು ಪ್ರಮುಖ ಆರ್ಥಿಕ ಅಭಿವೃದ್ಧಿ ಕೇಂದ್ರವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ರೂಪಿಸಿದೆ. ಈ ವಿಮಾನ ನಿಲ್ದಾಣವು ರಾಜ್ಯದ ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಪ್ರದೇಶಗಳ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದರು

Leave a Comment

Your email address will not be published. Required fields are marked *