ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಮೂಲಕ ಪ್ರೀತಮ್ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗೂ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರೀತಮ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೆನ್ ಡ್ರೈವ್ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಹಾಸನ ಜಿಲ್ಲೆಯ ಮಹಿಳೆಯೊಬ್ಬರು ದೂರು ನೀಡಿದ್ದು, ಪ್ರಜ್ವಲ್ ರೇವಣ್ಣ ಮತ್ತು ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.