ಕೊಡಗು:ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಜು.10ರಂದು ಪ್ರತಿಭಟನೆ….!

ಸಮಗ್ರ ನ್ಯೂಸ್: ಕೊಡಗಿನ ನರಿಯಂದಡ ಹಾಗೂ ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಈ ಭಾಗದ ಎಲ್ಲಾ ಗ್ರಾಮಸ್ಥರು ಒಟ್ಟು ಸೇರಿ ಜು.10 ಬುಧವಾರ ಉಗ್ರಹೋರಾಟ, ಪ್ರತಿಭಟನೆ, ಹಾಗೂ ರಸ್ತೆ ತಡೆ ನಡೆಸುವುದಾಗಿ ನರಿಯಂದಡ ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ ತಿಳಿಸಿದ್ದಾರೆ.

Ad Widget ... ..

ಪತ್ರಿಕಾ ಪ್ರಕಟಣೆ ನೀಡಿರುವ ಅವರು ನರಿಯಂದಡ, ಕೋಕೇರಿ, ಚೇಲಾವರ, ಕರಡ, ಅರಪಟ್ಟು, ಎಡಪಾಲ, ಮರಂದೋಡ, ಕುಂಜಿಲ, ಕಕ್ಕಬೆ ವ್ಯಾಪ್ತಿಯಲ್ಲಿ ಕಾಡಾನೆ ನಿರಂತರ ತೋಟಗಳಲ್ಲಿ ಬೀಡು ಬಿಟ್ಟು ದಾಳಿ ನಡೆಸುತ್ತಿದ್ದು ಹಾಗೂ ಈ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡು ಚೆಯ್ಯಂಡಾಣೆ ಪಟ್ಟಣದ ಹೃದಯ ಭಾಗದ ನಾಪೋಕ್ಲು, ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಉಗ್ರಹೋರಾಟ ಹಾಗೂ ಪ್ರತಿಭಟನೆ ಮತ್ತು ರಸ್ತೆ ತಡೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *