ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಟ್ರಸ್ಟ್, ರಾಮನ ಗರ್ಭಗುಡಿಯಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಡ್ರೆಸ್ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್ ಕೋಡ್ ಶೀಘ್ರ ಜಾರಿಯಾಗಲಿದೆ.
ಇದರ ಜೊತೆಗೆ ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅರ್ಚಕರು ತಮ್ಮ ಆ್ಯಂಡ್ರಾಯ್ಡ್ ಮೊಬೈಲ್‌ನೊಂದಿಗೆ ದೇವಸ್ಥಾನಕ್ಕೆ ಬರುವುದನ್ನು ಟ್ರಸ್ಟ್ ನಿಷೇಧಿಸಿದೆ. ಅಗತ್ಯವಿದ್ದರೆ ಸಂವಹನಕ್ಕಾಗಿ ಕೀಪ್ಯಾಡ್ ಫೋನ್‌ಗಳನ್ನು ಮಾತ್ರ ಬಳಸಬಹುದಾಗಿದೆ.