ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ.
ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ ಆಗಲಿದೆ.
ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್ ಪ್ರಕಟ
ಶುಕ್ರವಾರ ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಆರಂಭ ಆಗಲಿದೆ. ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಅಗತ್ಯವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಆ ವೇಳೆ, ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಖರೀದಿಗೆ ಅವಕಾಶ ನೀಡಲಾಗುತ್ತದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಮದ್ಯ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ.
ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ವೀಕೆಂಡ್‌ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತೆ. ರೈಲು, ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮದುವೆಯಲ್ಲಿ 100 ಜನರು ಭಾಗಿಯಾಗಲು ಅವಕಾಶ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನ ಭಾಗಿಯಾಗಲು ಅವಕಾಶ ಕೊಡಲಾಗಿದೆ.
ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ದೇಗುಲಗಳಲ್ಲಿ ಪೂಜೆ ಮಾಡುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ನಿಯಮ ಪಾಲಿಸಿ ಪೂಜೆ ಮಾಡಲು ಅವಕಾಶ ನೀಡಲಾಗಿದೆ. ಆದರೆ ದೇಗುಲಗಳಲ್ಲಿ ಜಾತ್ರೆ, ಮೆರವಣಿಗೆಗೆ ಅವಕಾಶವಿಲ್ಲ ಎಂದು ಸೂಚನೆ ನೀಡಲಾಗಿದೆ. ಅಗತ್ಯವಸ್ತುಗಳ ಕೈಗಾರಿಕೆಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ