Ad Widget .

ಬರೋಬ್ಬರಿ 100 ಜನರಿಂದ ಸುಲಿಗೆ ನಡೆಸಿದ ದಿವ್ಯಾ ವಸಂತ & ಗ್ಯಾಂಗ್| ರಾಜ್ಯವೇ ಖುಷಿ ಪಡುವ ಸುದ್ದಿ‌ ಕೊಟ್ಟವಳು ಸದ್ದಿಲ್ಲದೆ ಪರಾರಿ| ಆರೋಪಿಗಳ ಬೆನ್ನುಬಿದ್ದ ಖಾಕಿ ಪಡೆ

ಸಮಗ್ರ ನ್ಯೂಸ್: ಬೆಂಗಳೂರಿನ ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ‘ರಾಜ್ ನ್ಯೂಸ್ ಕನ್ನಡ’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಇಂದಿರಾನಗರದ 100 ಅಡಿ ರಸ್ತೆ 15ನೇ ಮುಖ್ಯರಸ್ತೆಯ ‘ಟ್ರಿ ಸ್ಟ್ರಾ ಅಂಡ್ ಬ್ಯೂಟಿ’ ಪಾರ್ಲ‌್ರನ ವ್ಯವಸ್ಥಾಪಕ ಶಿವಶಂಕ‌ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಒ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

Ad Widget . Ad Widget . Ad Widget .

ಸುಲಿಗೆ ಕೃತ್ಯಗಳಿಗೆ ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್‌ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.

ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್‌ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ 15 ಸಾವಿರ ರೂ. ಸಂಬಳ ಇದ್ದರೆ, ಮನರಂಜನಾ ವಾಹಿನಿಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರು. ಸಂಭಾ ವನೆ ಸಿಗುತ್ತಿತ್ತು. ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ, ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ ನ್ಯೂಸ್ ವಾಹಿನಿ ಸೇರುವ ಮುನ್ನ ಯೂಟ್ಯೂಬ್‌ನಲ್ಲಿ ತನ್ನದೇ ಚಾನಲ್ ಅನ್ನು ವೆಂಕಟೇಶ್ ಮಾಡಿಕೊಂಡಿದ್ದ. ಆ ಚಾನೆಲ್‌ಗೆ ಸಂದರ್ಶನಕ್ಕಾಗಿ ದಿವ್ಯಾಳನ್ನು ಆತ ಪರಿಚಯ ಮಾಡಿಕೊಂಡಿದ್ದ. ನಂತರ ಇಬ್ಬರ ನಡುವೆ ಆತ್ಮೀಯ ಒಡನಾಟವಿತ್ತು. ಈ ಗೆಳೆತನದಲ್ಲೇ ಇಬ್ಬರು ಸುಲಿಗೆ ಕೃತ್ಯಕ್ಕಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಸಾಜ್ ಪಾರ್ಲ‌ಗಳು ಹಾಗೂ ವೈದ್ಯರು ಸೇರಿ ಹಣವಂತರಿಗೆ ಹನಿಟ್ರ್ಯಾಪ್ ರೀತಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದರು. ಇದುವರೆಗೆ ಸುಮಾರು 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ.

ಸಂತ್ರಸ್ತರಿಂದ 80 ಸಾವಿರ, 50 ಸಾವಿರ ಹಾಗೂ 1 ಲಕ್ಷ ರು.ವರೆಗೆ ಆನ್‌ಲೈನ್‌ ಮೂಲಕ ತಮ್ಮ ಖಾತೆಗಳಿಗೆ ವೆಂಕಟೇಶ್‌ ಹಾಗೂ ದಿವ್ಯಾ ಹಣ ವರ್ಗಾಯಿಸಿಕೊಂಡಿರುವುದು ತನಿಖೆಯಲ್ಲಿ ಪತ್ತೆ ಯಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತು ಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾ ಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *