Ad Widget .

ರಾಜ್ಯದಲ್ಲಿ ಝೀಕಾ ವೈರಸ್ ಗೆ ಬಿತ್ತು ಮೊದಲ ಬಲಿ| ಶಿವಮೊಗ್ಗದಲ್ಲಿ ವೃದ್ಧ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೆಚ್ಚುತ್ತಿರುವ ಮಳೆಯಿಂದಾಗಿ ಈಗ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಇದರ ಬೆನ್ನಲ್ಲೆ, ಝೀಕಾ ವೈರಸ್ ಕೂಡ ರಾಜ್ಯಕ್ಕೆ ಒಕ್ಕರಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ.

Ad Widget . Ad Widget .

ಜ್ವರದಿಂದ ಬಳಲುತ್ತಿದ್ದ ವೃದ್ಧರನ್ನು ಶಿವಮೊಗ್ಗದ ಆಸ್ಪತ್ರೆಗೆ ಅವರ ಕುಟುಂಬ ದಾಖಲು‌ ಮಾಡಿತ್ತು. ಈ ವೇಳೆ ಅವರಿಗೆ ಝೀಕಾ ಸೋಂಕು ಇರುವುದು ಪತ್ತೆಯಾಗಿದೆ.

Ad Widget . Ad Widget .

ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು. ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು ಹೋಗಿದ್ದರು.

ನಿನ್ನೆ ಮನೆಯಲ್ಲಿ 74 ವರ್ಷದ ವೃದ್ಧರು ಝೀಕಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ 74 ವರ್ಷದ ವೃದ್ಧರ ಮೊದಲ ಬಲಿಯಾಗಿದ್ದಾರೆ.

Leave a Comment

Your email address will not be published. Required fields are marked *