ಸಮಗ್ರ ನ್ಯೂಸ್: ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜುಲೈ 6 ರಂದು ಕೇರ್ಪಳಧ ಬಂಟರ ಭವನದಲ್ಲಿ ನಡೆಯಿತು. ವಿಶೇಷವಾಗಿ ಕೆ.ಆರ್.ಗೋಪಾಲಕೃಷ್ಣ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಟಿ.ಎಂ.ಶಹೀದ್ ತೆಕ್ಕಿಲ್ ಅವರು ಅಡಿಕೆ ಗಿಡಕ್ಕೆ ನೀರೆರೆದು ಉದ್ಘಾಟಿಸಿ ಮಾತನಾಡಿದರು. ಸುಳ್ಯ ಭಾಗದಲ್ಲಿ ವ್ಯಾಪಕವಾಗಿರುವ ಅಡಿಕೆ ಹಳದಿ ರೋಗದ ಕುರಿತು ಸಮಗ್ರ ಸಂಶೋಧನೆ ಅಗತ್ಯ ಈ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಮತ್ತು ಸನ್ಮಾನಗೊಳ್ಳಲಿರುವ ಟಿ.ಎಂ.ಶಹೀದ್ ತೆಕ್ಕಿಲ್ ಹಾಗೂ ಇತರ ಅತಿಥಿಗಳನ್ನು ಗಾಂಧಿನಗದರದಲ್ಲಿ ಸ್ವಾಗತಿಸಿ, ವಾಹನ ಜಾಥಾದಲ್ಲಿ ವೇದಿಕೆಗೆ ಆಹ್ವಾನಿಸಲಾಯಿತು.
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಗೊಂಡಿದ್ದರು.
ಅಭಿನಂದನಾ ಸಮಿತಿಯ ಸಂಚಾಲಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಟಿ.ವಿಶ್ವನಾಥ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಕೆ.ಎಂ.ಮುಸ್ತಫ ಅವರು ವಂದಿಸಿದರು.






