ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದರೊಂದಿಗೆ
ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಅಧ್ಯಕ್ಷರಾಗಿ ನೇಮಕಗೊಂಡಿರುವುದು ಇದೇ ಮೊದಲು.

Ad Widget ... ..

ಪ್ರಥಮ ಬಾರಿಗೆ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸ್ಥಾನವನ್ನು ಉನ್ನತ ಶ್ರೇಣಿಯ ಅಲ್ಪಸಂಖ್ಯಾತ ಮಹಿಳೆಯೊಬ್ಬರು ತಮ್ಮ ವೃತ್ತಿಪರತೆಯನ್ನು ಉಳಿಸಿಕೊಂಡಿದ್ದಾರೆ.

Ad Widget

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರು 20 ವರ್ಷಗಳಿಂದ ಮಾಧ್ಯಮ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ದಿ ಏಷ್ಯನ್ ಏಜ್, ಸ್ಟಾರ್ ನ್ಯೂಸ್, ಆಜ್ ತಕ್, ದೂರದರ್ಶನ ಮುಂತಾದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದಾರೆ.

ಈ ಬಾರಿ ಮಾಧ್ಯಮ ಅಕಾಡೆಮಿ ಅಧ್ಯಕ್ಷರನ್ನಾಗಿ ಯಾರನ್ನು ನೇಮಿಸಬೇಕು ಎಂಬ ಚರ್ಚೆ ನಡೆದಾಗ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿದರು. ಇದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *