ಸಮಗ್ರ ನ್ಯೂಸ್: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿ ಸಿಸ್ಟರ್ ಪ್ರೆಸಿಲ್ಲ ಕುಮಾರಿ ಅವರು ಕೊಡಗು ಜಿಲ್ಲೆಯ ಶನಿವಾರಸಂತೆ ಹೋಬಳಿಯ ಬಸವನಕೊಪ್ಪ ಗ್ರಾಮದ ಪಕ್ಕದಲ್ಲಿ ಇರುವ ಗಡಿ ಭಾಗಕ್ಕೆ ಸೇರಿದ ಹಾಸನ ಜಿಲ್ಲೆಗೆ ಸೇರಿದ ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 16 ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಮತ್ತು ಪರಿಕರಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾನು ಇದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು ಈ ಶಾಲೆಯಲ್ಲಿ ಓದಿ ಇಂದು ನಾನು ಕಿನ್ಯಾ ಹೊರ ದೇಶದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ಈಗ ಮೈಸೂರಿನಲ್ಲಿ ಶಿಕ್ಷಕಿಯಾಗಿ ಆಗಿ ಕೆಲಸ ಮಾಡುತ್ತಿದ್ದೇನೆ, ವಿದ್ಯಾರ್ಥಿಗಳು ಚೆನ್ನಾಗಿ ಕಲಿತು ಮುಂದೆ ಬರಬೇಕು ಶಾಲೆಗೆ ಒಳ್ಳೆಯ ಹೆಸರು ತಂದುಕೊಡಬೇಕು ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತಂದುಕೊಡಬೇಕು ವಿದ್ಯಾರ್ಥಿಗಳಿಗೆ ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯೆ ಅಂಬಾಮಣಿ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ನೀವು ಪುಸ್ತಕಗಳನ್ನು ಕೊಡುತ್ತಿರುವುದು ಸಂತೋಷಕರ ವಿಚಾರ ಪುಸ್ತಕಗಳು ಮತ್ತು ಪರಿಕರಗಳನ್ನು ಕೊಟ್ಟ ಸಿಸ್ಟರ್ ಪ್ರೆಸಿಲ್ಲ ಕುಮಾರಿ ರವರಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸಿದರು.
ಶಾಲೆಯ ವತಿಯಿಂದ ಸಿಸ್ಟರ್ ಪ್ರೆಸಿಲ್ಲ ಕುಮಾರಿ ಅವರನ್ನು ಸನ್ಮಾನಿಸಿ ಕರ್ನಾಟಕ ರಕ್ಷಣಾ ವೇದಿಕೆ ನೆನಪಿನ ಕಾಣಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜಹಾಗೂ ಸಹ ಶಿಕ್ಷಕಿ ದಿವ್ಯ ದಿನೇಶ್ ಎಸ್ ಡಿಎಮ್ ಸಿ ಅಧ್ಯಕ್ಷೆ ಪೂರ್ಣಿಮಾ, ಸಹ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.