Ad Widget .

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಸಮಗ್ರ ನ್ಯೂಸ್‌: ಕರ್ನಾಟಕ ಹೈಕೋರ್ಟ್‌ ಹೇರಿದ್ದ ಪವರ್ ಟಿವಿ ಪ್ರಸಾರ ನಿರ್ಬಂಧದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಸೂಕ್ತ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ. ಅವರ ದನಿಯನ್ನು ಸಂಪೂರ್ಣವಾಗಿ ಉಡುಗಿಸಬೇಕು ಅನ್ನೋದು ಉದ್ದೇಶವಾಗಿತ್ತು. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹಿಡಿಯಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಸಾರಥ್ಯದ ಪೀಠವು ಹೇಳಿದೆ.

Ad Widget . Ad Widget . Ad Widget .

ಜುಲೈ 9 ರಂದು ಈ ಪ್ರಕರಣದ ಮುಂದನ ವಿಚಾರಣೆ ನಡೆಸೋದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ. ಹೀಗಾಗಿ, ಪವರ್ ಟಿವಿ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಬಹುದಾಗಿದೆ.

Leave a Comment

Your email address will not be published. Required fields are marked *