‘ಪ್ಲೀಸ್ ನನ್ನನ್ನು ಬಂಧಿಸಿ’| ಎಸ್ಐಟಿ ಗೆ ಮನವಿ‌ ಮಾಡಿದ ಶಾಸಕ ದದ್ದಲ್!

ಸಮಗ್ರ ನ್ಯೂಸ್: ಎಸ್‌ಐಟಿ ವಶದಲ್ಲಿರುವ ಶಾಸಕ ಬಸವನಗೌಡ ದದ್ದಲ್ ‘ನನ್ನನ್ನು ಬಂಧಿಸಿ’ ಎಂದು ಎಸ್ ಐ ಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ ಐ ಟಿ ಅಧಿಕಾರಿಗಳ ಎದುರು ಶಾಸಕ ದದ್ದಲ್ ವಿಚಾರಣೆಗೆ ಹಾಜರಾಗಿದ್ದಾರೆ.

Ad Widget ... ..

ವಿಚಾರಣೆ ವೇಳೆ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಇಡಿ ಇಕ್ಕಳದಿಂದ ತಪ್ಪಿಸಿಕೊಳ್ಳಲು ತಮ್ಮನ್ನು ಬಂಧಿಸುವಂತೆ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

Ad Widget

ಹೊರಗಡೆ ಬಂದರೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಶಾಸಕ ದದ್ದಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಅವರು ಎಸ್ ಐ ಟಿ ಅಧಿಕಾರಿಗಳಿಗೆ ಈ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.

Leave a Comment

Your email address will not be published. Required fields are marked *