ಮಡಿಕೇರಿ: ರಸ್ತೆ ಬದಿ ನಿಲ್ಲಿಸಿದ ಸ್ವಿಫ್ಟ್‌ ಕಾರಿಗೆ ಬೆಂಕಿ

ಸಮಗ್ರ ನ್ಯೂಸ್: ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ 275ರ ಸಂಪಿಗೆ ಕಟ್ಟೆ ಬಳಿ ತಾಂತ್ರಿಕ ದೋಷದಿಂದ ಸ್ವಿಫ್ಟ್‌ ಕಾರುವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರು ಸುಟ್ಟು ಕರಕಲಾಗಿದೆ.

Ad Widget ... ..

ಈ ಅವಘಡದಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಳೂರಿನ ಶ್ರೀನಿವಾಸ್ ಎಂಬುವವರು ಶನಿವಾರ ಬೆಳಗ್ಗೆ ಅಪಘಾತವಾಗಿದ್ದ ಕಾರನ್ನು ಹೆದ್ದಾರಿ ಬದಿ ನಿಲ್ಲಿಸಿದರು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಕಾರಿನಲ್ಲಿದ್ದವರು ಹೊರಗಡೆ ಬಂದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮ‌ಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ‌ ನಂದಿಸಿದರು.

Ad Widget

ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದಿಂದ ರಾಷ್ಟ್ರೀಯ ಹೆದ್ದಾರಿ‌ 275ರಲ್ಲಿ‌ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ.

Leave a Comment

Your email address will not be published. Required fields are marked *