Ad Widget .

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ

ಸಮಗ್ರ ನ್ಯೂಸ್: ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Ad Widget . Ad Widget . Ad Widget .

ಈ ನಡುವೆ ಐಆರ್‌ಬಿ ರಸ್ತೆ ನಿರ್ಮಾಣ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯೇ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನೋಡ ನೋಡುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ಗುಡ್ಡಿ ಕುಸಿದು ಬಿದ್ದಿತು. ಇಡೀ ನಾಲ್ಕು ಪಥದ ರಸ್ತೆಯೂ ಮಣ್ಣಿನಿಂದ ಮುಚ್ಚಿ ಹೋಗಿದೆ. ಗುಡ್ಡ ಕುಸಿತದ ವೇಳೆ ಕಾರೊಂದು ಹಾದುಹೋಗುತ್ತಿದ್ದು, ಈ ಕಾರಿನಲ್ಲಿ 5 ಮಂದಿ ಇದ್ದರು. ಎಲ್ಲರೂ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ನಡುವೆ ಗಂಗವಳ್ಳಿ ನದಿಯಲ್ಲಿ ಬೃಹತ್ ಟ್ಯಾಂಕರ್ ತೇಲುತ್ತಿರುವುದು ಕಂಡು ಬಂದಿದೆ. ಕ್ಯಾಂಟೀನ್ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಒಂದು ಗುಡ್ಡ ಕುಸಿತದ ರಭಸಕ್ಕೆ ಗಂಗವಳ್ಳಿ ನದಿಗೆ ಕೊಚ್ಚಿಹೋಗಿದೆ. ಇದರಿಂದ ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಕೂಡ ಸಾವನ್ನಪ್ಪಿರುವ ಶಂಕೆಗಳು ವ್ಯಕ್ತವಾಗಿವೆ. ಘಟನೆ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನೌಕಾಪಡೆ ಮತ್ತು ಇತರ ರಕ್ಷಣಾ ಪಡೆಗಳು ಈಗಾಗಲೇ ಸ್ಥಳದಲ್ಲಿ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸರದಲ್ಲಿ ವಿದ್ಯುತ್ ದೀಪ, ಒಲೆ ಹಚ್ಚದಂತೆ ಆದೇಶಿಸಲಾಗಿದೆ. ಅಲ್ಲದೇ ಸ್ಥಳೀಯರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಸೂಚಿಸಲಾಗಿದೆ.

Leave a Comment

Your email address will not be published. Required fields are marked *