ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಜು.18ರಂದು ಉ.ಕ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 10 ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯ ಕುಮಟಾ, ಅಂಕೋಲ, ಹಳಿಯಾಳ, ಮುಂಡಗೋಡ, ಹೊನ್ನಾವರ, ಸಿದ್ದಾಪುರ, ಭಟ್ಕಳ, ಜೊಯ್ಡಾ, ಕಾರವಾರ, ಶಿರಸಿ, ಯಲ್ಲಾಪುರದ ಅಂಗನವಾಡಿ, ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ‌ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಮುಂದಿನ ದಿನಗಳಲ್ಲಿ ರಜಾ ದಿನಗಳನ್ನು ಭರ್ತಿಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Ad Widget

Leave a Comment

Your email address will not be published. Required fields are marked *