ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾ. ಹೆದ್ದಾರಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಘಾಟ್ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಕಾರ್ಯಾಚರಣೆ ಸಾಗುತ್ತಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜ್ಯಾಂ ಉಂಟಾಗಿದೆ.
ಭಾರೀ ಮಳೆಗೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ತಡೆಗೋಡೆ ಕುಸಿದಿದೆ. ಸುಮಾರು 25 ಅಡಿಯಷ್ಟು ಮಣ್ಣು ಹಾಕಿ ತಡೆಗೋಡೆ ನಿರ್ಮಿಸಲಾಗಿದ್ದು, ಅದು ಕೊಚ್ಚಿ ಹೋಗಿದೆ.
ಹೆದ್ದಾರಿಗೆ ಹೊಂದಿಕೊಂಡಂತೆ 500 ಮೀಟರ್ ಉದ್ದದ ತಡೆಗೋಡೆ ಕುಸಿಯುತ್ತಿದ್ದು, ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗುವ ಆತಂಕ ಎದುರಾಗಿದೆ.