ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ ಎಲ್ಲೆಲ್ಲಿ ಜು. 18ರಂದು ಶಾಲೆ, ಕಾಲೇಜುಗಳು ಬಂದ್ ಆಗಲಿವೆ? ಮಾಹಿತಿಗಾಗಿ ಮುಂದೆ ಓದಿ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಇದರ ಜತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ದಾವಣಗೆರೆ, ಮೈಸೂರು & ಮಂಡ್ಯ ಸೇರಿ ಚಿತ್ರದುರ್ಗ, ತುಮಕೂರು, ಕಲಬುರಗಿ, ಬೀದರ್, ಕೋಲಾರದಲ್ಲೂ ಮಳೆ ಅಬ್ಬರ ಗ್ಯಾರಂಟಿ ಆಗಿದೆ. ಅದರಲ್ಲೂ ಬೆಂಗಳೂರಲ್ಲಿ ಇನ್ನೂ 3 ದಿನಗಳ ಕಾಲ ಸೂರ್ಯ ಕಾಣುವುದೇ ಡೌಟ್. ಹೀಗೆ ಮುಂದಿನ 3 ದಿನ ಇದೇ ರೀತಿ ಮಳೆ ಅಬ್ಬರ ಇರಲಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ ಯಾವ ಊರಲ್ಲಿ ರಜೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕದ ಕರಾವಳಿ ಭಾಗ ಹಾಗೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ಈಗ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆ & ಕಾಲೇಜುಗಳಿಗೆ ರಜೆ ನೀಡಿ ಹೊಸನಗರ ತಹಸೀಲ್ದಾರ್ ರಶ್ಮಿ & ತೀರ್ಥಹಳ್ಳಿ ತಹಸೀಲ್ದಾರ್ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ & ಕಾಲೇಜುಗಳಿಗೆ ಜುಲೈ 18ಕ್ಕೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳಾದ ಲಕ್ಷ್ಮೀಪ್ರಿಯಾ ಆದೇಶ ನೀಡಿದ್ದು, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಮತ್ತೊಂದು ಕಡೆ ಹಾಸನ ಜಿಲ್ಲೆ ಸಕಲೇಶಪುರ, ಆಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೇ ಕೊಡಗು ಜಿಲ್ಲೆಯಲ್ಲೂ ನಾಳೆಯ ದಿನ ಶಾಲೆ & ಕಾಲೇಜು ಬಂದ್ ಆಗಲಿವೆ.
ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕಿನ ಅಂಗನವಾಡಿ ಹಾಗು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ದ.ಕ ಜಿಲ್ಲೆಯಲ್ಲೂ ಮಳೆಯಾರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶಿಸಿದ್ದಾರೆ.