ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನಗಳನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಗಳಿಗೆ ಬಳಸಬಾರದಾಗಿ ಸೂಚನೆ ನೀಡಲಾಗಿದೆ.
ಅಲ್ಲದೇ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸದಂತೆಯೂ ಸುತ್ತೋಲೆಯಲ್ಲಿ ಸೂಚಿಸಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ತಿಳಿಸಲಾಗಿದ್ದು, ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಹೊಣೆಗಾರರಾಗುತ್ತಾರೆಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.