ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ

ಸಮಗ್ರ ನ್ಯೂಸ್‌: ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಇಂದು ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮುಖಾಮುಖಿಯಾಗಲಿದೆ. ಇಂದು ರಾತ್ರಿ ಶ್ರೀಲಂಕಾದ ಡಂಬುಲದಲ್ಲಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ.

Ad Widget ... ..

7 ಬಾರಿ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್ ಗೆಲ್ಲುವ ಫೇವರಿಟ್ ಆಗಿದೆ. 2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್ ಅಂತರದ ಆಘಾತಕಾರಿ ಸೋಲುಣಿಸಿ ಚೊಚ್ಚಲ ಏಷ್ಯಾ ಕಪ್ ಗೆದ್ದು ಸಂಭ್ರಮಿಸಿತ್ತು. ಈ ಒಂದು ಆವೃತ್ತಿ ಬಿಟ್ಟರೆ ಉಳಿದೆಲ್ಲ ಆವೃತ್ತಿಯಲ್ಲಿಯೂ ಭಾರತವೇ ಕಪ್ ಗೆದ್ದು ಪಾರುಪತ್ಯ ಸಾಧಿಸಿದೆ.

Ad Widget

Leave a Comment

Your email address will not be published. Required fields are marked *