ಭಾರೀ ಮಳೆ ಹಿನ್ನೆಲೆ| ಜು.20ರಂದು ಕೊಡಗು ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ| ಚಿಕ್ಕಮಗಳೂರಿನಲ್ಲೂ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 20ರಂದು ಕೊಡಗು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯಲ್ಲಿ ಕಾವೇರಿ, ಲಕ್ಷ್ಮಣತೀರ್ಥ‌‌ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ.

Ad Widget

ಇನ್ನು ಕಾಫಿ‌ನಾಡು ಚಿಕ್ಕಮಗಳೂರಿನಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎನ್.ಆರ್ ಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜು.20ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *