ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ.
ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.
ಇನ್ನೂ ಹಾಸನ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಇನ್ನೂ ಭಾನುವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು (30-40 ಕಿಮೀ) ವಿಪರೀತ ಮಳೆಯಾಗಲಿದೆ. ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿ.ಸೆ ಇರಲಿದೆ.
ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.