ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭಾನುವಾರ (ಜು.21) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಬಳಸಿ, ಉನ್ನತ ಮೆಟಲ್ ಡಿಟೆಕ್ಟರ್ ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ಮತ್ತು ಸೂಚನೆ. ಜೊತೆಗೆ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯವರಿಗೆ ಸಿಎಂ ಶ್ಲಾಘನೆ ತಡೆದರು. ಈ ಸಂದರ್ಭದಲ್ಲಿ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಸತೀಶ್ ಸೈಲ್ ಸೇರಿದಂತೆ ಇನ್ನಿತರ ಶಾಸಕರು ಇದ್ದರು.
ಶಿರೂರು ಬಳಿ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.
ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.