ಸಮಗ್ರ ನ್ಯೂಸ್: ಸರ್ಕಾರಿ ಅಧಿಕಾರಿಗಳು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
58 ವರ್ಷಗಳ ಹಿಂದೆ ನೀಡಲಾದ ಸಾಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರವು ಹಿಂಪಡೆದಿದೆ ಎಂದು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹೇಳಿಕೊಂಡಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಿದರೆ, ಶಿಸ್ತು ಕ್ರಮ ಜರಗಿಸುವ ಕಾನೂನನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸರ್ದಾರ್ ಪಟೇಲ್ ಅವರು ಫೆಬ್ರವರಿ 1948 ರಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ನ್ನು ನಿಷೇಧಿಸಿದ್ದರು.