ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಕಾಂಗ್ರೆಸ್ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುಲ್ಕಲ್ ಗ್ರಾಮದ ನಿವಾಸಿ. ಕುರುಬ ಸಮುದಾಯದ ಪ್ರಭಾವಿ ಮುಂಖಡರಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.
ಇವರು ಕಲಬುರಗಿ ತೊಗರಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ತೊಗರಿ ನಿಗಮ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೂ ಆಪ್ತರಾಗಿದ್ದರು. ಮರಿಗೌಡ ಪಾಟೀಲ್ ಹುಲ್ಕಲ್ ಹಿಂದೆ ಕುರಿ ಉಣ್ಣೆ ನಿಗಮ ಹಾಗೂ ಭೀಮರಾಯನಗುಡಿ ಕೃಷ್ಣ ಕಾಡಾ ಅಧ್ಯಕ್ಷರಾಗಿದ್ದರು. ಇದೀಗ ಮರಿಗೌಡ ಪಾಟೀಲ್ ಹುಲ್ಕಲ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.







