ಸಮಗ್ರ ನ್ಯೂಸ್: ಎರಡು ವರ್ಷದ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಅನಂತರದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಜು. 22ರಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ನಂದಕುಮಾರ್, ಕಮಲಾಕ್ಷ, ಅರುಣ್ ರೈ, ಪದ್ಮನಾಭ ತಡಗಜೆ, ಪ್ರಶಾಂತ್, ಆನಂದ ಯು., ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್ ಬಾಳಿಲ, ಡಿಪಿನ್ ಎಡಮಂಗಲ, ಶಿವಾನಂದ, ಹರ್ಷಿತ್, ನಿತೀಶ್ ಕೆ. ಅವರ ಮೇಲೆ ಕೇಸು ದಾಖಲಿಸಲಾಗಿತ್ತು. ಅವರೆಲ್ಲರೂ ನಾವು ಯಾರೂ ಈ ಘಟನೆಗಳಲ್ಲಿ ಭಾಗಿಯಾಗಿರುವುದಿಲ್ಲವೆಂದು ಹಿಂದೂ ಮುಖಂಡ ಶಿವ ಪೂಜಾರಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೈವಸ್ಥಾನದ ಅರ್ಚಕ ತಿಮ್ಮಪ್ಪ ನಾವೂರು ಉಪಸ್ಥಿತರಿದ್ದರು.