ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಸಮಗ್ರ ನ್ಯೂಸ್‌: ವಿಶ್ವಪ್ರಸಿದ್ಧ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್‌ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ. ಈ ಕಾರಣದಿಂದ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Ad Widget ... ..

ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳು ಕೂಡ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದ್ರೆ ವಾಕಿಂಗ್ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆ ಇದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *