ಮಂಗಳೂರಿನಲ್ಲಿ ಬೀಸಿದ ಭಾರೀ ಬಿರುಗಾಳಿ| ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿ, ಶಿಕ್ಷಕಿಗೆ ಗಾಯ

ಸಮಗ್ರ ನ್ಯೂಸ್: ಶುಕ್ರವಾರ ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ. ಶಾಲೆ, ಮನೆಯ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬ ಧರಾಶಾಹಿಯಾಗಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ.

Ad Widget ... ..

ಕೃಷ್ಣಪುರ ಕಾರುಣ್ಯ ವಿದ್ಯಾಲಯದ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Ad Widget

ಬಡಾವಣೆಗೆ ಸಂಪರ್ಕವಿರುವ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ವಿದ್ಯುತ್ ತಂತಿಗಳು ತುಂಡಾಗಿವೆ. ಪಕ್ಕದ ಮನೆಯ ಶೀಟ್ ಹಾರಿ ಬಂದು ಇನ್ನೊಂದು ಮನೆಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಭಾರೀ ಗಾಳಿ ಬೀಸಿದ ಪರಿಣಾಮ ಮನೆಯ ಹಂಚು ಹಾರಿ ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಂತಹ ಘಟನೆ ನಡೆದಿಲ್ಲ.

Leave a Comment

Your email address will not be published. Required fields are marked *