Ad Widget .

ವಾರ ಕಳೆದರೂ ತಗ್ಗದ ಕುಮಾರಧಾರ, ನೇತ್ರಾವತಿ| ಧರ್ಮಸ್ಥಳ, ಕುಕ್ಕೆಯಲ್ಲಿ ಮುಳುಗಡೆ ಸ್ಥಿತಿಯಲ್ಲೇ ಇರುವ ಸ್ನಾನಘಟ್ಟ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೊಂಚ ವಿರಾಮ ನೀಡಿದ್ದರೂ ಘಟ್ಟ ಪ್ರದೇಶಗಳಲ್ಲಿ ಮಳೆ‌ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಯಾವುದೇ ಇಳಿಕೆಯಾಗಿಲ್ಲ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಂಟ್ವಾಳ ತಾಲೂಕಿನ ಕೆಲವೊಂದು ತಗ್ಗು ಪ್ರದೇಶ ನದಿ ನೀರಿನಿಂದ ಜಲಾವೃತಗೊಂಡಿದೆ. ನೆರೆಯ ಭೀತಿಯ ಹಿನ್ನೆಲೆ ಸ್ಥಳೀಯ ನಿವಾಸಿಗಳನ್ನು ಕೂಡ ಸ್ಥಳಾಂತರಿಸಲಾಗಿದೆ .

Ad Widget . Ad Widget . Ad Widget .

ಈ ಬಾರಿಯ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಸಾವುನೋವು ಸಂಭವಿಸಿದೆ. ಕರಾವಳಿಯಲ್ಲಿ ಮಳೆ ಆಗುತ್ತಿಲ್ಲವಾದ್ರೂ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಇದರಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಧರ್ಮಸ್ಥಳದಲ್ಲಿ ಹರಿಯುತ್ತಿರುವ ನೇತ್ರಾವತಿ ಸ್ನಾನಘಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ಸ್ನಾನಘಟ್ಟದಲ್ಲಿ ಅಪಾಯದ ಮಟ್ಟದಲ್ಲಿರುವ ನೇತ್ರಾವತಿಯ ಹರಿವಿನಿಂದ ಹೆಚ್ಚಿನ ಭದ್ರತೆ ಮಾಡಲಾಗಿದೆ. ಪ್ರವಾಸಿಗರು ಇಲ್ಲಿ ತೀರ್ಥ ಸ್ನಾನ ಮಾಡಲು ನದಿಗೆ ಇಳಿಯದಂತೆ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸೂಚನೆ ನೀಡಿದೆ.

ಇತ್ತ ಕುಕ್ಕೆ ‌ಸುಬ್ರಹ್ಮಣ್ಯದಲ್ಲೂ ಕುಮಾರಧಾರ ಸ್ನಾನಘಟ್ಟ ಕಳೆದ ಹತ್ತು ದಿನಗಳಿಂದ ಮುಳುಗಡೆ ಸ್ಥಿತಿಯಲ್ಲೇ ಮುಂದುವರಿದಿದೆ. ಯಾತ್ರಾರ್ಥಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ ಡ್ರಮ್ ಗಳಲ್ಲಿ ನೀರು ತುಂಬಿಸಿಟ್ಟು ಪುಣ್ಯಸ್ನಾನಕ್ಕೆ ವ್ಯವಸ್ಥೆ ಕಲ್ಪಿಸಿದೆ.

Leave a Comment

Your email address will not be published. Required fields are marked *